ಮಾದಕ ವಸ್ತು ಸೇವನೆ ಶಂಕೆ: ಮಂಗಳೂರಿನ 22ರ ಯುವಕನ ವಿರುದ್ಧ ಕ್ರಮ

0
8

ಮಂಗಳೂರು : ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಿಕಾನ ಫ್ಲೈಓವರ್ ಬಳಿ ಮಾದಕ ವಸ್ತು ಸೇವನೆ ಮಾಡಿರುವ ಶಂಕೆಯ ಮೇರೆಗೆ 22 ವರ್ಷದ ಯುವಕನ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಅಕ್ಟೋಬರ್ 13ರಂದು ಸಂಜೆ ಸುಮಾರು 7:30ರ ವೇಳೆಗೆ ಉರ್ವ ಪೊಲೀಸ್ ಠಾಣೆಯ ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕುಂಟಿಕಾನ ಫ್ಲೈಓವರ್ ಬಳಿ ಯುವಕನೊಬ್ಬ ಸಿಗರೇಟ್ ಸೇದುತ್ತಿರುವುದು ಕಂಡುಬಂದಿದೆ. ಈ ವೇಳೆ ಆತನನ್ನು ವಿಚಾರಿಸಿದಾಗ, ಮಾದಕ ವಸ್ತು ಸೇವನೆಯ ಅಮಲಿನಲ್ಲಿರುವಂತೆ ಮಾತನಾಡುತ್ತಿದ್ದ ಎನ್ನಲಾಗಿದೆ.

ವಿಚಾರಣೆ ವೇಳೆ ಯುವಕನನ್ನು ಮಂಗಳೂರಿನ ಕೊಂಚಾಡಿ, ದೇರೇಬೈಲ್‌ನ ಮೂಕಾಂಬಿಕಾ ದೇವಸ್ಥಾನದ ಸಮೀಪದ ನಿವಾಸಿ ಪವನ್ ರಾಜ್ (22), ಹರೀಶ್ ಅವರ ಪುತ್ರ ಎಂದು ಗುರುತಿಸಲಾಗಿದೆ.

ಈ ಸಂಬಂಧ ಉರ್ವ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಂಡಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.