
ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಳ್ಳಾರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಫರ್ಧೆಯಲ್ಲಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ವಿದ್ಯಾಗಿರಿ ಬಂಟ್ವಾಳ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ತನ್ವಿ.ಆರ್. ಸುವರ್ಣ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರು ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
2024 ನೇ ಸಾಲಿನಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟ÷ದ ಸ್ಫರ್ಧೆಯಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡಿರುತ್ತಾರೆ.
ಇವರಿಗೆ ಶಾಲಾ ಸಂಚಾಲಕಿ, ಆಡಳಿತ ಮಂಡಳಿ, ಶಾಲಾ ಮುಖ್ಯಸ್ಥರು, ಶಿಕ್ಷಕ ವೃಂದ ಮತ್ತು ಬೋಧಕೇತರ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
