ಎಸ್.ವಿ.ಟಿ ವನಿತಾ ಪ.ಪೂ. ಕಾಲೇಜು; ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

0
210

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ, ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ಆತಿಥ್ಯದಲ್ಲಿ ನಡೆಯಿತು.


ಬಾಲಕರ ವಿಭಾಗದಲ್ಲಿ ಎಸ್. ಎನ್ .ವಿ ಪದವಿ ಪೂರ್ವ ಕಾಲೇಜ್ ಹಿರಿಯಂಗಡಿ ಪ್ರಥಮ ಸ್ಥಾನವನ್ನು, ಸರಕಾರಿ ಪದವಿ ಪೂರ್ವ ಕಾಲೇಜು ಕಾರ್ಕಳ ದ್ವಿತೀಯ ಸ್ಥಾನವನ್ನು , ಬಾಲಕಿಯರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಪ್ರಥಮ ಸ್ಥಾನವನ್ನು ಹಾಗೂ ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು, ಮುಂಡ್ಕೂರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರಥಮ ಸ್ಥಾನವನ್ನು ಪಡೆದಿರುವ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿನ ಬಾಲಕಿಯರ ತಂಡ ಮತ್ತು ಎಸ್ ಎನ್ ವಿ ಪದವಿಪೂರ್ವ ಕಾಲೇಜು ಹಿರಿಯಂಗಡಿ ಇಲ್ಲಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here