ಮಂಗಳೂರು : ರಾಮಕೃಷ್ಣ ಮಿಷನ್‌ನ ವತಿಯಿಂದ ನಡೆಯುತ್ತಿರುವ”ವಿವೇಕ ಜಾಗೃತಿ” ಸರಣಿಉಪನ್ಯಾಸ ಮಾಲಿಕೆಯ ಪ್ರಯುಕ್ತಬಳ್ಳಾರಿಯ ರಾಮಕೃಷ್ಣ ಮಿಷನ್‌ನ ಮುಖ್ಯಸ್ಥರಾದ ಸ್ವಾಮಿ ಮಂಗಳನಾಥನAದಜಿ15 ಜೂನ್ 2026 ರ ಸೋಮವಾರದಂದು ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳಲ್ಲಿ ವಿಶೇಷ ಉಪನ್ಯಾಸಗಳು ನಡೆಯಲಿವೆ.
ಮೊದಲ ಉಪನ್ಯಾಸ ಸ್ವಾಮೀಜಿಯವರ ಮೊದಲ ಉಪನ್ಯಾಸವುಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಸುಜ್ಞಾನ ದೀಪಿಕಾಸಭಾಂಗಣದಲ್ಲಿಬೆಳಗ್ಗೆ 10 ಗಂಟೆಗೆ ಸರಿಯಾಗಿನಡೆಯಲಿದ್ದು “Character First, Career Next” ಕಾನೂನು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಸಂದೇಶ” ಎಂಬ ವಿಷಯದಕುರಿತು ಮಾತನಾಡಲಿದ್ದಾರೆ.
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಸಂಚಾಲಕರಾದ ವಿಜಯನಾರಾಯಣ ಕೆ.ಎಮ್.ಕಾರ್ಯಕ್ರಮದಅಧ್ಯಕ್ಷತೆಯನ್ನು ವಹಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿಭಾರತೀಯ ಸೇನೆಯ ನಿವೃತ್ತಯೋಧ ಹಾಗೂ ಮಂಗಳೂರು ರಾಮಕೃಷ್ಣ ಮಿಷನ್‌ನ ಹಿರಿಯ ಸ್ವಯಂಸೇವಕ ಬೆಳ್ಳಾಲ ಗೋಪಿನಾಥ್‌ರಾವ್, ವಿವೇಕಾನಂದ ಕಾನೂನು ಮಹಾವಿದ್ಯಾಲಯದಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದಡಾ. ಬಿ.ಕೆ.ರವೀಂದ್ರ, ಪ್ರಾಂಶುಪಾಲರಾದಡಾ. ಅಕ್ಷತಾ ಎ.ಪಿ. ಉಪಸ್ಥಿತರಿರಲಿದ್ದಾರೆ. ಕಾಲೇಜಿನಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಭಾಗವಹಿಸಲಿದ್ದಾರೆ.
ಎರಡನೇಉಪನ್ಯಾಸ ಪುತ್ತೂರಿನನೆಹರು ನಗರದ ವಿವೇಕಾನಂದಆವರಣದಲ್ಲಿರುವ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿಮಧ್ಯಾಹ್ನ2.15 ಕ್ಕೆ ಸ್ವಾಮೀಜಿಯವರಎರಡನೇಉಪನ್ಯಾಸ ನಡೆಯಲಿದ್ದು”ಶಕ್ತಿ, ಶ್ರದ್ಧೆ ಮತ್ತು ಸಾಧನೆ – ಯುವಕರಿಗೆ ಸ್ವಾಮಿ ವಿವೇಕಾನಂದರ ಸಂದೇಶ” ಎಂಬ ವಿಷಯದಕುರಿತು ಮಾತನಾಡಲಿದ್ದಾರೆ.
ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದರವೀಂದ್ರ ಪಿ. ಕಾರ್ಯಕ್ರಮದಅಧ್ಯಕ್ಷತೆಯನ್ನು ವಹಿಸಲಿದ್ದಾರೆ.ಈ ಸಂದರ್ಭದಲ್ಲಿ ಭಾರತೀಯ ಸೇನೆಯ ನಿವೃತ್ತಯೋಧ ಹಾಗೂ ಮಂಗಳೂರು ರಾಮಕೃಷ್ಣ ಮಿಷನ್‌ನ ಹಿರಿಯ ಸ್ವಯಂಸೇವಕ ಬೆಳ್ಳಾಲ ಗೋಪಿನಾಥ್‌ರಾವ್, ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದದೇವಿಚರಣ್‌ರೈಎಮ್. ಉಪಸ್ಥಿತರಿರಲಿದ್ದಾರೆ. ಕಾಲೇಜಿನಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಭಾಗವಹಿಸಲಿದ್ದಾರೆ.
ಎರಡೂ ಕಾರ್ಯಕ್ರಮಗಳಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಸುಮಾರು 500 ಕ್ಕೂ ಹೆಚ್ಚು ಕಾನೂನು ವಿದ್ಯಾರ್ಥಿಗಳು ಹಾಗೂ ಪದವಿಪೂರ್ವ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

