ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯತ್, ಪುರಸಭೆ ಮೂಡುಬಿದಿರೆ, ಯುವಜನ ಒಕ್ಕೂಟ ಮೂಡುಬಿದಿರೆ ಇದರ ಆಶ್ರಯದಲ್ಲಿ ಸಮಾಜ ಮಂದಿರದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ಯುವ ಸಪ್ತಾಹ ಮತ್ತು ವಿವೇಕ ರಥ ಯುವ ಪಥ ಯುವ ಜಾಗೃತಿ ಜಾಥ ಇದಕ್ಕೆ ಚಾಲಾನೆ ನೀಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ಪುರಸಭಾ ಅಧ್ಯಕ್ಷರಾದ ಪ್ರಸಾದ್ ಕುಮಾರ್ ನೆರವೆರಿಸಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಳ್ವಾಸ್ ವಿದ್ಯಾಸಂಸ್ಥೆಯ ದೇವಿ ಪ್ರಸಾದ್ ಶೆಟ್ಟಿ, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಸುಚರಿತ ಶೆಟ್ಟಿ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ದಯಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ, ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗೇಶ್, ನೋಡಲ್ ಅಧಿಕಾರಿ ಶ್ರೀ ಮಾಮಚನ್,ಯುವಜನ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ರೈ ಸೂಡಿಮುಳ್ಳು, ಪಂಚಾಯತ್ ಸದಸ್ಯರಾದ ರಮೇಶ್ ಶೆಟ್ಟಿ, ನಾಗಶ್ರೀ, ವಿವಿಧ ಶಾಲಾಕಾಲೇಜಿನ ಅಧ್ಯಾಪಕರು, NCC, NSS ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು.