Sunday, July 21, 2024
HomeUncategorizedಸಿಎಂ ಸ್ಥಾನ ಡಿಕೆಶಿಗೆ ಬಿಟ್ಟುಕೊಡುವಂತೆ ಸಿದ್ದರಾಮಯ್ಯಗೆ ಒಕ್ಕಲಿಗ ಸ್ವಾಮೀಜಿ ಮನವಿ

ಸಿಎಂ ಸ್ಥಾನ ಡಿಕೆಶಿಗೆ ಬಿಟ್ಟುಕೊಡುವಂತೆ ಸಿದ್ದರಾಮಯ್ಯಗೆ ಒಕ್ಕಲಿಗ ಸ್ವಾಮೀಜಿ ಮನವಿ

ಬೆಂಗಳೂರು: ಎಲ್ಲರೂ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಎದುರಲ್ಲೇ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515ನೇ ಜಯಂತೋತ್ಸವ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ. ಶಿವಕುಮಾರ್‌ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ಸ್ವಾಮೀಜಿ ಹೇಳಿದರು.
ಸ್ವಾಮೀಜಿ ಈ ರೀತಿ ಹೇಳುವಾಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ವೇದಿಕೆಯಲ್ಲಿ ಅಕ್ಕಪಕ್ಕದಲ್ಲೇ ಮೌನವಾಗಿ ಕುಳಿತಿದ್ದರು.

RELATED ARTICLES
- Advertisment -
Google search engine

Most Popular