
ಉಜಿರೆ: ಮೈಸೂರಿನ ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಶನಿವಾರ ಧರ್ಮಸ್ಥಳಕ್ಕೆ ಆಗಮನಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಪಟ್ಟಾಭಿಷೇಕದ ೫೮ನೆ ವರ್ಧಂತ್ಯುತ್ಸವದ ಸಂದರ್ಭ ಗೌರವಿಸಿ ಅಭಿನಂದಿಸಿದರು.
ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.
ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
