ರೇಡಿಯೋ ಅಸೋಸಿಯೇಶನ್ ಮತ್ತು ಯುನಿಸೆಫ್ ನ ಸಹಯೋಗದಲ್ಲಿ ಅಲೆವೂರಿನ ಸುಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಶಿಕ್ಷಕರಾದ ರೇಖಾ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಪೌಷ್ಠಿಕ ಆಹಾರದ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಮಣಿಪಾಲದ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರಾದ ಡಾ.ರಶ್ಮಿ ಅಮ್ಮೆಂಬಳ ರೇಡಿಯೋ ಮಣಿಪಾಲದ ಜಾಗೃತಿ ಕಾರ್ಯಕ್ರಮದ ಕುರಿತು ಪ್ರಸ್ತಾವನೆಗೈದರು. ಶಾಲಾ ಮುಖ್ಯಶಿಕ್ಷಕರಾದ ಪುಷ್ಪಲತ ಉಪಸ್ಥಿತರಿದ್ದರು. ಶಾಲಾ ಸಿಬ್ಬಂದಿಗಳು ಸಹಕರಿಸಿದರು.