ಬಂಟ್ವಾಳ: ತಾಲೂಕಿನಲ್ಲಿ ಒಂದೆಡೆ ಇಂದು ಕೋಮು ಉದ್ವಿಗ್ನತೆಗೆ ಕಾರಣವಾದರೆ, ಇನ್ನೊಂದೆಡೆ ಸೌಹಾರ್ದತೆಗೆ ಸಾಕ್ಷಿಯಾಗಿದೆ. ಬಂಟ್ವಾಳದ ಕೇಂದ್ರಸ್ಥಾನ ಬಿ.ಸಿ. ರೋಡ್‌ನಲ್ಲಿ ಹಿಂದೂ, ಮುಸ್ಲಿಂ ಪ್ರಮುಖರ ಹೇಳಿಕೆಯಿಂದ ಪರಿಸ್ಥಿತಿ ಹದಗೆಟ್ಟು, ಉದ್ವಿಗ್ನ ಸ್ಥಿತಿ ನಿರ್ಮಾಣವಾದರೆ, ಇನ್ನೊಂದೆಡೆ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಂಧುಗಳಿಗೆ ಹಿಂದೂಗಳು ಸಿಹಿ ತಿನಿಸು, ಐಸ್‌ಕ್ರೀಂ, ನೀರಿನ ಬಾಟಲಿ ಹಂಚಿ ಭಾವೈಕ್ಯತೆ ಮೆರೆದಿದ್ದಾರೆ.
ಮಾಣಿ ಜಂಕ್ಷನ್‌ನಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಕೇಸರಿ ಶಾಲು ಹಾಕಿಕೊಂಡು ಹಿಂದೂ ಯುವಕರು ಮುಸ್ಲಿಂ ಮುಖಂಡರು ಮತ್ತು ಮಕ್ಕಳಿಗೆ ಸಿಹಿ, ಐಸ್‌ಕ್ರೀಂ, ನೀರಿನ ಬಾಟಲ್ ವಿತರಣೆ ಮಾಡಿದರು. ಕೊಡಾಜೆಯಲ್ಲೂ ಕೂಡ ಹಿಂದೂಗಳು ಈದ್ ಮಿಲಾದ್ ಮೆರವಣಿಗೆಯಲ್ಲಿದ್ದ ಮುಸ್ಲಿಮರಿಗೆ ಸಿಹಿ ಹಂಚಿದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸ್ವೀಟ್ ಬಾಕ್ಸ್ ವಿತರಿಸಿ ಹಬ್ಬದ ಶುಭಾಶಯ ಕೋರಿದರು. ಈ ಕುರಿತ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.