Tuesday, January 14, 2025
Homeಉಡುಪಿಕಂಬಳ ಪ್ರಿಯರಿಗೆ ಸಿಹಿ ಸುದ್ದಿ: ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ರಾಜ್ಯ...

ಕಂಬಳ ಪ್ರಿಯರಿಗೆ ಸಿಹಿ ಸುದ್ದಿ: ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ರಾಜ್ಯ ಸರ್ಕಾರ ಆದೇಶ

ಉಡುಪಿ: ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಕಳೆದ ವರ್ಷ ಕಂಬಳಕ್ಕೆ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಬೇಡಿಕೆ ಸಲ್ಲಿಸಿದ್ದರು. ಅಲ್ಲದೆ, ಸ್ಪೀಕರ್ ಯು.ಟಿ.ಖಾದರ್ ಕಂಬಳ ಪರ ಬ್ಯಾಟಿಂಗ್ ಮಾಡಿದ್ದರು.
ಇದರ ಬೆನ್ನಲ್ಲೇ ಕಂಬಳಕ್ಕೆ ಅನುದಾನ ಬಿಡುಗಡೆಗೆ ಸರ್ಕಾರ ಆದೇಶ ಮಾಡಿದೆ. ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಪ್ರವಾಸೋದ್ಯಮ ಸಚಿವ ಹೆಚ್​​ಕೆ ಪಾಟೀಲ್ ಆದೇಶ ಹೊರಡಿಸಿದ್ದಾರೆ. 2024- 25 ನೇ ಸಾಲಿನ 24 ಜೋಡು ಕರೆ ಕಂಬಳಗಳಿಗೆ ತಲಾ 5 ಲಕ್ಷ ರೂ. ಘೋಷಣೆಯಾಗಿದೆ. ಕಂಬಳಕ್ಕೆ ಬೆಂಬಲವಾಗಿ ನಿಂತ ರಾಜ್ಯ ಸರ್ಕಾರಕ್ಕೆ ಕಂಬಳ ಸಮಿತಿ ಅಭಿನಂದನೆ ಸಲ್ಲಿಸಿದೆ.

RELATED ARTICLES
- Advertisment -
Google search engine

Most Popular