ಮೂಳೂರು: ಪಡುಬಿದ್ರೆಯಿಂದ ಕಾಪು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ಮೂಳೂರು ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಸವಾರರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.

KA20Z3581 ನೋಂದಣಿ ಸಂಖ್ಯೆಯ ಸ್ವಿಫ್ಟ್ ಕಾರು, KA20EA6130 ನೋಂದಣಿ ಸಂಖ್ಯೆಯ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ನಲ್ಲಿದ್ದ ಸವಾರರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಆಂಬುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅಪಘಾತದ ಬಳಿಕ ಎರಡೂ ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿಯ ಬದಿಗೆ ಸ್ಥಳಾಂತರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಾಪು ಪೊಲೀಸ್ ಠಾಣೆಯ ಠಾಣಾಧಿಕಾರಿ (SHO) ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.

