ಆಗ್ನೆಯ ಪದವೀಧರರ ಕ್ಷೇತ್ರದಿಂದ ಸ್ಪರ್ಧಿಸಲು ಸೈಯದ್ ಅಫಾಖ್ ಅಹಮದ್ ಸಿದ್ಧತೆ

0
17


ಬೆಂಗಳೂರು: ಆಗ್ನೆಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಈ ಭಾರಿ ಸ್ಪರ್ದಿಸಲು ಸಿದ್ಧತೆ ಮಾಡಿರುವುದಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ತಿಳಿಸಿದ್ದಾರೆ.
ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಶಿಕ್ಷಕರು ಎದರಿಸುತ್ತಿರುವ ನೂರೆಂಟು ಬಗೆಯ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯ ಕಲ್ಪಿಸಿಕೊಡಬೇಕು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧನೆ ಮಾಡಬೇಕು ಎನ್ನುವ ದೃಷ್ಟಿಯಿಂದ ಚುನಾವಣೆಗೆ ಸ್ಪರ್ದಿಸಲು ನಿರ್ಧರಿಸಿದ್ದೇನೆ ಎಂದರು
2026ರಲ್ಲಿ ವಿಧಾನ ಪರಿಷತ್‌ಗೆ ಆಗ್ನೆಯ ಪದವೀಧರರ ಕ್ಷೇತ್ರದಿಂದ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಈಗಾಗಲೇ ಮತದಾರರ ನೊಂದಾಣಿ ಕಾರ್ಯ ನಡೆಯುತ್ತಿದೆ. ತಾವು ಕ್ಷೇತ್ರದಲ್ಲಿ ಮತದಾರರನ್ನು ನೊಂದಾಯಿಸುವ ಕೆಲಸದಲ್ಲಿ ತೊಡಗಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದು, ಈ ಪೈಕಿ ಅತಿ ಹೆಚ್ಚು ಮಂದಿ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಹೋರಾಟ ಮಾಡಲಾಗುವುದು. ಕಳೆದ ಮೂವತ್ತು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದೇನೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಕ್ಷೇತ್ರದ ವಿವಿಧ ಹುದ್ದೆಗಳಲ್ಲಿ ಸೇವೆಸಲ್ಲಿಸಿದ್ದು, ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿದೆ. ಶಿಕ್ಷಣ ಕ್ಷೇತ್ರದ ಸಂಪೂರ್ಣ ಮಾಹಿತಿ ಇದ್ದು, ಹಲವಾರು ಹಿತೈಷಿಗಳ ಒತ್ತಾಸೆಯೂ ಇರುವ ಕಾರಣ ಬಯಲು ಸೀಮೆಯ ಮದ್ಯ ಕರ್ನಾಟಕದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಲು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದೇನೆ ಎಂದು ಹೇಳಿದರು
ಕಳೆದ 2024ರಲ್ಲಿ ಆಗ್ನೆಯ ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿಯೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದು, ನಿರೀಕ್ಷೆಯಂತೆಯೇ ಮತದಾರರು ನನ್ನನ್ನು ಬೆಂಬಲಿಸಿದ್ದರು. ಈ ಬಾರಿಯೂ ಸ್ಪರ್ದಿಸಲು ಕ್ಷೇತ್ರದ ಎಲ್ಲಡೆಯಿಂದಲೂ ಒತ್ತಡ ಬರುತ್ತಿದೆ. ಈಗಾಗಲೇ ಇಡೀ ಕ್ಷೇತ್ರದಲ್ಲಿಯೂ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

LEAVE A REPLY

Please enter your comment!
Please enter your name here