ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರಿಯಾ ವೈಯೊಲ ಬರೆಟ್ಟೋ ಜಿಲ್ಲಾ ಮಟ್ಟದಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.