ಫೆ. 21ರಂದು ಮೂಡುಬಿದಿರೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

0
9

ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲ್ಲೂಕು ಘಟಕದ ಆಶ್ರಯದಲ್ಲಿ ನಡೆಯಲಿರುವ ದ್ವಿತೀಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ 21,2026 ಶನಿವಾರ ಕಡಂದಲೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಲಿದೆ.

ಈ ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಸಾಮಾಜಿಕ ಮುಂದಾಳು ಸುಚರಿತ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಫೆಬ್ರವರಿ 2ರಂದು ಕಡಂದಲೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಪ್ರಮುಖರ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಸಮ್ಮೇಳನದ ರೂಪುರೇಷೆಗಳ ಕುರಿತು ಚರ್ಚೆ ನಡೆಯಿತು.

ಸಭೆಯಲ್ಲಿ ಪರಿಷತ್ತಿನ ಕೋಶಾಧ್ಯಕ್ಷ ಅಂಡಾರು ಗುಣಪಾಲ ಹೆಗ್ಡೆಯವರು ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಸಾಹಿತ್ಯದ ಉಳಿವು-ಬೆಳವಣಿಗೆಗೆ ಇಂತಹ ಸಮ್ಮೇಳನಗಳ ಮಹತ್ವವನ್ನು ವಿವರಿಸಿದರು. ಬಳಿಕ ತಾಲ್ಲೂಕು ಅಧ್ಯಕ್ಷ ಕೆ. ವೇಣುಗೋಪಾಲ ಶೆಟ್ಟಿಯವರು ಸಮ್ಮೇಳನದ ಪ್ರಾಥಮಿಕ ರೂಪುರೇಷೆಗಳನ್ನು ಸಭೆಯ ಮುಂದಿಟ್ಟು, ಕಾರ್ಯಕ್ರಮದ ವಿವಿಧ ಆಯಾಮಗಳನ್ನು ವಿವರಿಸಿದರು.

ಕಡಂದಲೆ ಪರಿಸರದಲ್ಲಿರುವ ಎಲ್ಲಾ ಸಂಘ-ಸಂಸ್ಥೆಗಳ ಸಹಕಾರವನ್ನು ಕೋರಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಭಾಗಿತ್ವ ಅಗತ್ಯವೆಂದು ತಿಳಿಸಿದರು. ಕಾರ್ಯದರ್ಶಿ ಸದಾನಂದ ನಾರಾವಿ ಸ್ವಾಗತಿಸಿ, ಹೋಬಳಿ ಅಧ್ಯಕ್ಷ ರಾಮಕೃಷ್ಣ ಶಿರೂರು ವಂದಿಸಿದರು.

LEAVE A REPLY

Please enter your comment!
Please enter your name here