Thursday, December 5, 2024
Homeಬಂಟ್ವಾಳತಾಲೂಕು ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

ತಾಲೂಕು ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

ತಾಲೂಕು ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ಸರ್ಕಾರಿ ಪ್ರೌಢಶಾಲೆ ಸಜಿಪಮೂಡ ಇಲ್ಲಿ ದ ಕ ಜಿ ಪ ಹಿರಿಯ ಪ್ರಾಥಮಿಕ ಶಾಲೆ ಆಲಾಡಿ ಸಜೀಪಮುನ್ನೂರು ಇದರ ಆಶ್ರಯದಲ್ಲಿ ಗುರುವಾರದಂದು ಜರಗಿತು. ಈ ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಇಓ ಮಂಜುನಾಥ ಜಿ. ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ. ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ. ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಪ್ರಸಾದ್ ರೈ crpo ಇಂದಿರಾ. ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಣೇಶ್. ಆಲಾಡಿ ಶಾಲಾ ಮುಖ್ಯೋಪಾಧ್ಯಾಯನಿ ರೋಹಿಣಿ. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹಮ್ಮದ್ ಕಬೀರ್. ತಾಲೂಕು ಪಂಚಾಯತ್ ಮಾಜಿ ಸದಸ್ಯ ಮೊಹಮ್ಮದ್ ಶರೀಫ್. ಗ್ರಾಮ ಪಂಚಾಯಿತಿ ಸದಸ್ಯರಾದ ಪೌಜಿಯ. ಸರಸ್ವತಿ. ಸುಂದರ ಪೂಜಾರಿ ಆಲಾಡಿ ಶಾಲಾ ದೈಹಿಕ ಶಿಕ್ಷಕಿ ಸುರೇಖಾ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಸುಭಾಷ್ ನಗರ ಸಜಿಪ ಮೂಡ ಬಾಲಕಿಯರ ವಿಭಾಗದಲ್ಲಿ ಕಕ್ಕೆ ಪದವು ಶಾಲಾ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟಕ್ಕೆ ಬಾಲಕ ಬಾಲಕಿಯರ ತ್ರೋಬಾಲ್ ತಂಡವನ್ನು ಆಯ್ಕೆ ಮಾಡಲಾಯಿತು.

RELATED ARTICLES
- Advertisment -
Google search engine

Most Popular