ಮೂಡುಬಿದಿರೆ:ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ತಾಲೂಕು ಪಂಚಾಯತ್ ಮೂಡುಬಿದಿರೆ, ಮೂಡುಬಿದಿರೆ ಪುರಸಭೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಕುಮಾರ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮುಲ್ಕಿ ಮೂಡುಬಿದ್ರೆ ಶಾಸಕರಾದ ಉಮಾನಾಥ ಕೋಟ್ಯಾನ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗೇಶ್, ಕ್ರೀಡಾ ಇಲಾಖೆಯ ಮಂಜು, ಪ್ರವೀಣ್, ದೈಹಿಕ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.