ಮೂಡುಬಿದಿರೆ : ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮೂಡುಬಿದಿರೆ ಮತ್ತು ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಇವರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರೋಟರಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ನಾರಾಯಣ್ ಪಿ.ಎಂ, ರೋಟರಿ ಸಂಸ್ಥೆಯ ಸಂಚಾಲಕರಾದ ಮೋಹನ್ ಭಟ್, ಶಿಕ್ಷಣ ಇಲಾಖೆಯ ನಿತ್ಯಾನಂದ ಶೆಟ್ಟಿ, ನಾಗೆಶ್, ಸುನಿಲ್ ಮಿರಂದ, ರಾಮಕೃಷ್ಣ ಶಿರೂರು, ಶಾಲೆಯ ಮುಖ್ಯೋಪಾಧ್ಯಾಯರಾದ ತಿಲಕ ಜೈನ್, ದೈಹಿಕ ಶಿಕ್ಷಕರು ಮತ್ತು ಕ್ರೀಡಾಪಟುಗಳು ಉಪಸ್ಥಿತರಿದ್ದರು.