ವೇಣೂರು: ಇಲ್ಲಿಯ ನವಚೇತನ ಆಂಗ್ಲಮಾಧ್ಯಮ ಶಾಲೆಯ ಬಾಲಕಿಯರ ತಂಡವು ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ, ಕಾಶಿಪಟ್ಣ ಇಲ್ಲಿ ಕ್ರೀಡಾಕೂಟ ನಡೆದಿದ್ದು, ಪ್ರಾಥಮಿಕ ವಿಭಾಗದ ತ್ರೋ ಬಾಲ್ ಪಂದ್ಯಾಟ ದಲ್ಲಿ ನವಚೇತನ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಹಾಗೂ ಬಾಲಕರ ತಂಡವು ತೃತೀಯ ಸ್ಥಾನ ವನ್ನು ಪಡೆದುಕೊಂಡಿದೆ. ವಿದ್ಯಾರ್ಥಿನಿ ಯವರಾದ ಕುl ಫಾತಿಮಾ ರಿ ಫಾ, ಕು l ಸಂಪ್ರೀತಾ ಹಾಗೂ ಕು l ಪ್ರಾಪ್ತಿ ಇವರು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ ಕ್ಕೆ ಆಯ್ಕೆ ಯಾಗಿರುತ್ತಾರೆ.
ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಭಗಿನಿ ವೀರ ಡಿ ‘ಸೋಜಾ, ಶಿಕ್ಷಕ – ಶಿಕ್ಷಕೇತರ ವೃಂದ, ಶಿಕ್ಷಕ -ರಕ್ಷಕ ಸಂಘ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದರು.