ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಜೂನ್ 12ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ
ಮಧ್ಯಾಹ್ನ 12:30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ದೇವಸ್ಥಾನಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದರ್ಶನ ಮುಗಿಸಿ ಮಧ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಮರಳಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನದ ಮೂಲಕ ಚೆನ್ನೈಗೆ ವಾಪಸ್ ತೆರಳಲಿದ್ದಾರೆ.

