ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್‌ ಭೇಟಿ: ಸಾಮಾನ್ಯ ಭಕ್ತರಂತೆ ದೇವಿ ದರ್ಶನ

0
18

ಉಡುಪಿ : ತಮಿಳುನಾಡಿನ ನೂತನ ಮುಖ್ಯಮಂತ್ರಿ ಹಾಗೂ ಖ್ಯಾತ ನಟ ವಿಜಯ್‌ ಅವರು ಇಂದು ಮಧ್ಯಾಹ್ನ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ.

ಸಿಎಂ ವಿಜಯ್‌ ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಯಾವುದೇ ವಿಶೇಷ ವ್ಯವಸ್ಥೆ ಅಥವಾ ವಿಶೇಷ ಪೂಜೆಗಳನ್ನು ಆಯೋಜಿಸಲಾಗುವುದಿಲ್ಲ ಎಂದು ದೇವಳದ ಮುಖ್ಯ ತಂತ್ರಿ ನಿತ್ಯಾನಂದ ಅಡಿಗ ಸ್ಪಷ್ಟಪಡಿಸಿದ್ದಾರೆ. “ಕೊಲ್ಲೂರು ಕ್ಷೇತ್ರದಲ್ಲಿ ಎಲ್ಲ ಭಕ್ತರಿಗೂ ಒಂದೇ ರೀತಿಯ ಅವಕಾಶವಿದ್ದು, ಮುಖ್ಯಮಂತ್ರಿ ಬಂದಿದ್ದಾರೆ ಎಂಬ ಕಾರಣಕ್ಕೆ ಪ್ರತ್ಯೇಕ ಪೂಜೆ ಅಥವಾ ವಿಶೇಷ ಗೌರವ ನೀಡುವುದಿಲ್ಲ. ಅವರು ಸಹ ಸಾಮಾನ್ಯ ಭಕ್ತರಂತೆ ದೇವಿಯ ದರ್ಶನ ಪಡೆಯಲಿದ್ದಾರೆ” ಎಂದು ತಿಳಿಸಿದ್ದಾರೆ.

ವಿಜಯ್‌ ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಭಕ್ತರ ದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ.

ತಮಿಳುನಾಡಿನ ರಾಜಕೀಯ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭಿಸಿರುವ ವಿಜಯ್‌, ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಿಗೆ ಆಗಮಿಸುತ್ತಿರುವುದು ವಿಶೇಷ ಮಹತ್ವ ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here