ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯು ಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಕರು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟು ದೇಶಕ್ಕೆ ಉತ್ತಮ ಪ್ರಜೆಯಾಗಿ ರೂಪಿಸಬೇಕಾದವರೇ ಪುಟ್ಟ ಬಾಲಕಿ ಎಂದೂ ನೋಡದೆ ಅತ್ಯಾಚಾರವೆಸಗಿದ್ದಾರೆ. ಹೆಣ್ಣುಮಕ್ಕಳನ್ನು ಗೌರವಿಸಬೇಕು, ಅವರನ್ನು ರಕ್ಷಿಸಬೇಕೆನ್ನುವ ಪಾಠವನ್ನು ಗಂಡು ಮಕ್ಕಳಿಗೆ ಚಿಕ್ಕಂದಿನಿಂದಲೇ ತಿಳಿಸಿಕೊಡಬೇಕಿದ್ದ ಶಿಕ್ಷಕರು ಇಂತಹ ಅಚಾತುರ್ಯವೆಸಗಿದ್ದಾರೆ.
ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ, ತಾಯಿ ಹಲ್ಲೆ ನಡೆಸಿರುವುದಾಗಿ ಬಹಿರಂಗಪಡಿಸಿದರು.
ಮುಖ್ಯೋಪಾಧ್ಯಾಯರು ತಕ್ಷಣವೇ ಪೊಲೀಸ್ ದೂರು ದಾಖಲಿಸಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ವರದಿ ಮಾಡುವಂತೆ ಸೂಚಿಸಿದರು. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃಷ್ಣಗಿರಿಯ ಮಹಿಳಾ ಪೊಲೀಸ್ ತಂಡ ಮೂವರು ಆರೋಪಿ ಶಿಕ್ಷಕರನ್ನು ಬಂಧಿಸಿದ್ದು, ಅವರು ಈಗ 15 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ಕೃಷ್ಣಗಿರಿ ಜಿಲ್ಲೆಯ ಪೋಚಂಪಲ್ಲಿ ಬಳಿಯ ಸರ್ಕಾರಿ ಶಾಲೆಯಲ್ಲಿ 13 ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಈಗ ಬೆಳಕಿಗೆ ಬಂದಿದೆ. ಆರುಮುಗಂ, ಪ್ರಕಾಶ್ ಮತ್ತು ಚಿನ್ನಸ್ವಾಮಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಗಳು ಬಂದ ನಂತರ ಈ ಮೂವರು ಶಿಕ್ಷಕರನ್ನು ವಜಾಗೊಳಿಸಲಾಗಿದೆ. ಅವರ ವಿರುದ್ಧ ತನಿಖೆಗೂ ಆದೇಶಿಸಲಾಗಿದೆ.
ಪೊಲೀಸರು ಮೂವರು ವ್ಯಕ್ತಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ. ಮೂವರನ್ನೂ ಬಂಧಿಸಲಾಗಿದೆ. ತಮಿಳುನಾಡಿನಲ್ಲಿ ತೀವ್ರ ಆಘಾತ ಉಂಟುಮಾಡಿರುವ ಈ ಘಟನೆಗೆ ಸಂಬಂಧಿಸಿದಂತೆ ಕೆಲವು ಸುಳ್ಳು ಮಾಹಿತಿಗಳನ್ನು ಹರಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.
ಈ ಬಗ್ಗೆ ಮಾತನಾಡಿದ ಕೃಷ್ಣಗಿರಿ ಜಿಲ್ಲಾಧಿಕಾರಿ ದಿನೇಶ್ ಕುಮಾರ್, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಆದರೆ ಬಾಲಕಿಗೆ ಗರ್ಭಪಾತವಾಗಿದೆ ಹೀಗಾಗಿ ಶಾಲೆಗೆ ಹೋಗಿತ್ತಿಲ್ಲ ಎಂದು ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ ಅಂಥವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ. ಕೃಷ್ಣಗಿರಿ ಶಾಲಾ ಘಟನೆ ಬೆಳಕಿಗೆ ಬರುತ್ತಿದ್ದಂತೆ, ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕೆಂದು ಎಐಎಡಿಎಂಕೆ ಒತ್ತಾಯಿಸಿದೆ.