ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ನೆಲ್ಯಾಡಿಯಲ್ಲಿ ಟ್ಯಾಂಕರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಮಗು ಸಹಿತ ದಂಪತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಮುಹಮ್ಮದ್ ಶರೀಫ್, ಅವರ ಪತ್ನಿ ಆಯಿಷಾ ತಸ್ಲೀಮಾ ಮತ್ತು ಮಗು ಮುಹಮ್ಮದ್ ರಫೀ ಗಾಯಗೊಂಡವರು. ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದೆ. ಶರೀಫ್ ಅವರ ಕಾಲಿಗೆ ಹಾಗೂ ಆಯಿಷ ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನವೊಂದನ್ನು ಓವರ್ ಟೇಕ್ ಮಾಡಿಕೊಂಡು ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ಚಾಲಕ ಓಡಲು ಯತ್ನಿಸಿದ್ದು, ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.