ತೆರಿಗೆ ವಂಚನೆ ಕೇಸ್:‌ ಮಂಗಳೂರು RTO ಕಚೇರಿಯ ಮೂವರು ಅಧಿಕಾರಿಗಳ ಅಮಾನತು

0
195

ಮಂಗಳೂರು : ಬೆಲೆಬಾಳುವ ಕಾರು ನೋಂದಣಿಯ ವೇಳೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು RTO ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

RTO ಕಚೇರಿಯ ಪ್ರಥಮ ದರ್ಜೆ ಸಹಾಯಕ ನೀಲಪ್ಪ, ಕಚೇರಿಯ ಅಧೀಕ್ಷಕಿ ರೇಖಾ ನಾಯಕ್ ಹಾಗೂ ಸ್ಥಾನೀಯ ಸಹಾಯಕಿ ಸರಸ್ವತಿ ಅಮಾನತುಗೊಂಡ ಅಧಿಕಾರಿಗಳು.

ಈ ಮಧ್ಯೆ RTO ಶ್ರೀಧರ್ ಮಲ್ಲಾಡ್ ವಿರುದ್ಧ ಇಲಾಖಾ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಲಾಖಾ ವಿಚಾರಣೆ ಬಾಕಿಯಿರಿಸಿ ಮೂವರನ್ನು ಅಮಾನತುಗೊಳಿಸಿದ್ದಲ್ಲದೆ ಬೇರೆ ಕಡೆಗಳಿಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here