ಟಿಡಿಪಿ ನೇತೃತ್ವದ ಮೈತ್ರಿಕೂಟಕ್ಕೆ ದಾಖಲೆಯ ಬಹುಮತ
ಅಮರಾವತಿ: ಆಂಧ್ರ ಪ್ರದೇಶ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದ್ದು, ಚಂದ್ರಬಾಬು ನಾಯ್ಡು ನೇತೃತ್ವದ ಎನ್ ಡಿಎ ಅಧಿಕಾರಕ್ಕೆ ಬಂದಿದೆ. ಸಿಎಂ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರನ್ನು ಅಧಿಕಾರದಿಂದ ಕಿತ್ತೆಸೆದಿರುವ ಟಿಡಿಪಿ ನೇತೃತ್ವದ ಮೈತ್ರಿಕೂಟ, 175 ಸದಸ್ಯ ಬಲದ ಆಂಧ್ರ ವಿಧಾನಸಭೆಯಲ್ಲಿ 162 ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಿದೆ.
ಟಿಡಿಪಿ 135, ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ 11 ಕ್ಷೇತ್ರಗಳಲ್ಲಿ ಗೆದ್ದಿದೆ. ಆಂಧ್ರ ವಿಭಜನೆಗೊಂಡ ಬಳಿಕ ನಡೆಯುತ್ತಿರುವ ಮೂರನೇ ವಿಧಾನಸಭೆ ಚುನಾವನೆ ಇದು. ಟಿಡಿಪಿ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದ್ದು. ಚಂದ್ರಬಾಬು ನಾಯ್ಡು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ಖಚಿತವಾದಂತಾಗಿದೆ.