ಮಡಿಕೇರಿ: ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಪ್ರಾಥಮಿಕ ಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಪ್ರಕರಣ ವರದಿಯಾಗಿದೆ.
ಮೃತ ಶಿಕ್ಷಕಿಯನ್ನು ರೋಹಿಣಿ (51) ಎಂದು ಗುರುತಿಸಲಾಗಿದ್ದು, ಅವರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿದ ಬಳಿಕ ಅವರು ಈ ದುರ್ಘಟನೆಗೆ ಕೈ ಹಾಕಿರುವುದು ಸ್ಥಳೀಯರನ್ನು ದುಃಖಕ್ಕೀಡು ಮಾಡಿದೆ.
ಮಾಹಿತಿ ಪ್ರಕಾರ, ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಅವರು ತಮ್ಮ ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಘಾತ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

