ಶಿಕ್ಷಕ ಕಾಯ್ಕಿಣಿಯವರ ವಿದಾಯ ಸಮಾರಂಭ

0
5

ಮೂಡುಬಿದಿರೆ : ನೆಲ್ಲಿಕಾರು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಶಿವಾನಂದ ಕಾಯ್ಕಿಣಿಯವರನ್ನು ಗೌರವಿಸಿ ಅಭಿನಂದಿಸಲಾಯಿತು. ಕಳೆದ ಮೂರು ದಶಕಗಳಿಂದ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ,ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾಗಿ, ಮೂಡುಬಿದಿರೆ ತಾಲೂಕು ಯುವಜನ ಕ್ರೀಡಾ ಇಲಾಖೆಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವ ಇವರು ದಕ್ಷ ಪ್ರಾಮಾಣಿಕ ಶಿಕ್ಷಕರಾಗಿ, ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಕರ್ನಾಟಕ ರಾಜ್ಯದ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕೋಶಾಧಿಕಾರಿಯಾಗಿ, ಮೂಡುಬಿದರೆ ತಾಲೂಕು ಅಧ್ಯಕ್ಷರಾಗಿ ಮತ್ತು ವಿವಿಧ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿರುತ್ತಾರೆ. ಕ್ರಿಯಾಶೀಲ ವ್ಯಕ್ತಿತ್ವವನ್ನು ಹೊಂದಿರುವ ಕಾಯ್ಕಿಣಿಯವರು ತಮ್ಮ ಕ್ರಿಯಾಶೀಲ ನಡೆ ನುಡಿಗಳಿಂದ ವಿದ್ಯಾರ್ಥಿಗಳಿಗೆ ಸಹೋದ್ಯೋಗಿ ಬಂಧುಗಳಿಗೆ ಆತ್ಮೀಯರಾಗಿದ್ದರು. ಇಲಾಖೆಯ ಅಧಿಕಾರಿಗಳಜೊತೆಯಲ್ಲಿ ಉತ್ತಮ ಬಾಂಧವ್ಯವನ್ನು ಹೊಂದಿರುವ ಇವರು ಶಿಕ್ಷಕರ ನೋವು ನಲಿವುಗಳಿಗೆ ಸ್ಪಂದಿಸುವ ಗುಣವನ್ನು ಬೆಳೆಸಿಕೊಂಡಿರುತ್ತಾರೆ.

ಇವರ ವಿದಾಯ ಸಮಾರಂಭಕ್ಕೆ ವಿದ್ಯಾರ್ಥಿಗಳ ಜೊತೆಯಲ್ಲಿ ಎಸ್. ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಿಕ್ಷಣ ಇಲಾಖೆಯ ಜಿಲ್ಲಾ ಹಂತದ ಮತ್ತು ತಾಲೂಕು ಹಂತದ ಅಧಿಕಾರಿಗಳು,ವಿವಿಧ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು,ವಿವಿಧ ಶಿಕ್ಷಕ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ನಿವೃತ್ತ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ಹಿತೈಷಿಗಳು ಆಗಮಿಸಿ ಶುಭ ಹಾರೈಸಿದರು.