ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

0
4

ಅನುದಾನಿತ ಶ್ರೀ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ ಮೈರ್ಪಾಡಿ ಕುಳಾಯಿ ಇಲ್ಲಿ ಶಿಕ್ಷಕ -ರಕ್ಷಕ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಪ್ರಾರಂಭದಲ್ಲಿ ಡಾ.ಸರ್ವಪಳ್ಳಿ ರಾಧಾ ಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕಿ ಕೆ.ಕಲಾವತಿ ವಹಿಸಿ ಮೌಲ್ಯಯುತ ಶಿಕ್ಷಣ ದೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿ ಕೊಳ್ಳಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಹಿಂದು ವಿದ್ಯಾದಾಯಿನೀ ಸಂಘದ ಜೊತೆ ಕೋಶಾಧಿಕಾರಿ ಟಿ.ಯನ್ ರಮೇಶ್,ವಿದ್ಯಾದಾಯಿನೀಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀನಿವಾಸ ಕುಳಾಯಿ ಉಪಸ್ಥಿತರಿದ್ದು ,ಗುರುವಿನ ಮಹತ್ವವನ್ನ ತಿಳಿ ಹೇಳಿ ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು.ಮುಖ್ಯಶಿಕ್ಷಕರಾದ ಗೋಪಾಲ್.ವಿ ಗುರು-ಶಿಷ್ಯ ಸಂಬಂಧದ ಮಹತ್ವದ ಬಗ್ಗೆ ಮಾತನಾಡಿದರು.

ಮಕ್ಕಳು ಶಿಕ್ಷಕರ ದಿನಾಚರಣೆ ಬಗ್ಗೆ ಭಾಷಣ ಮಾಡಿದರು.ಈ ಸಂದರ್ಭ ಎಲ್ಲಾ ಶಿಕ್ಷಕರನ್ನು, ಶಿಕ್ಷಕೇತರ ಸಿಬ್ಬಂದಿ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು.ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಮಂಜುನಾಥ ರವರು ಉಪಸ್ಥಿತರಿದ್ದು ಕಾರ್ಯಕ್ರಮ ಸಂಯೋಜಿಸಿದ್ದರು.

ಎಲ್ಲರನ್ನು ಶಿಕ್ಷಕ-ರಕ್ಷಕ ಸಂಘದ ಸದಸ್ಯರಾದ ರೇಷ್ಮಾ ಹೃತ್ಪೂರ್ವಕವಾಗಿ ಸ್ವಾಗತಿಸಿದರು.ಉಪಾಧ್ಯಕ್ಷೆ ಪೂರ್ಣಿಮಾ ರವರು ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕ-ರಕ್ಷಕ ಸಂಘದ ಸದಸ್ಯರಾದ ಭವ್ಯ ರವರು ವಂದನಾರ್ಪಣೆ ಸಲ್ಲಿಸಿದರು.ನಂತರ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.