
ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಮೃತ ಭಾರತಿ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಮಾತನಾಡಿ ಸಮಾಜದಲ್ಲಿ ಶಿಕ್ಷಕರ ತ್ಯಾಗ ಸ್ತುತ್ಯರ್ಹ. ವೈಯಕ್ತಿಕ ಜೀವನದಲ್ಲಿ ಇರುವ ಸಮಸ್ಯೆಗಳನ್ನು ಬದಿಗೊತ್ತಿ ಸಮಾಜದ ಏಳಿಗೆಗಾಗಿ ದುಡಿಯುವ ಕೈಗಳು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಿ ಸತ್ಕರಿಸಿ, ವಿವಿಧ ಮನೋರಂಜನಾ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿ ನಾಯಕ ಗಗನ್ ಎಂ ಆಚಾರ್ಯ ಮತ್ತು ತಂಡದವರು ನೀಡಿದರು.
ಈ ಸಂದರ್ಭದಲ್ಲಿ ಅಮೃತ ಭಾರತಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್, ಶಕುಂತಲಾ, ವಿದ್ಯಾರ್ಥಿಗಳು ಮತ್ತು ಗುರುವೃಂದದವರು ಉಪಸ್ಥಿತರಿದ್ದರು.
