ಲಯನ್ಸ್ ಕ್ಲಬ್ ಹಿರಿಯಡ್ಕ ವತಿಯಿಂದ ಆತ್ರಾಡಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0
140

ಲಯನ್ಸ್ ಕ್ಲಬ್ ಹಿರಿಯಡ್ಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶಿಕ್ಷಕರ ದಿನಾಚರಣೆಯನ್ನುಆಚರಿಸಲಾಯಿತು. ಮುಖ್ಯ ಶಿಕ್ಷಕಿ ಸರಸ್ವತಿ, ಸಹ ಶಿಕ್ಷಕಿಯರಾದ ಜ್ಯೋತಿ, ಶಬನಾ ಪರ್ವೀನ್, ಸುಹಾಸಿನಿ, ವಿಮಲಾ, ಶಾರದಾ ರವರನ್ನು ಶಾಲು ಹೊದಿಸಿ ಹಾರ, ಪುಷ್ಪ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಹಿರಿಯಡ್ಕದ ಅಧ್ಯಕ್ಷರಾದ ರಘುವೀರ್ ಶೆಟ್ಟಿಗಾರ್ ರವರು ಶಿಕ್ಷಕರ ದಿನಾಚರಣೆಯ ಮಹತ್ವ ವನ್ನು ತಿಳಿಸುತ್ತ ಲಯನ್ಸ್ ಕ್ಲಬ್ ಹಿರಿಯಡ್ಕದ ಕಾರ್ಯ ಚಟುವಟಿಕೆಗಳ ಮಾಹಿತಿ ಯನ್ನು ನೀಡಿದರು.

ಕಾರ್ಯಕ್ರಮ ದಲ್ಲಿ ಲಯನ್ಸ್ ಕ್ಲಬ್ ಹಿರಿಯಡ್ಕದ ಸದಸ್ಯರಾದ ಹರೀಶ್ ಹೆಗ್ಡೆ, ರವೀಂದ್ರ ನಾಥ್ ಹೆಗ್ಡೆ , ಡಾ. ಸತೀಶ್ ಶೆಟ್ಟಿ ಬಾಲಕೃಷ್ಣ ಹೆಗ್ಡೆ ಮತ್ತು ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸತ್ಯಾನಂದ ನಾಯಕ್ ಆತ್ರಾಡಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here