ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು ಹಾಗೂ ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ, ದಕ್ಷಿಣ ಕನ್ನಡ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ಮಾಜಿ ರಾಷ್ಟ್ರಪತಿ ದಿ| ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜರುಗಲಿದೆ. ಸೆ.8ರಂದು ಆದಿತ್ಯವಾರ, ಬೆಳಿಗ್ಗೆ ಘಂಟೆ 8.45ಕ್ಕೆ, ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಶಿವಕುಮಾರ್ ಬಿ ಎಂ, ಸಹಾಯಕ ಪ್ರಾಧ್ಯಾಪಕರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಳೆಯಂಗಡಿ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಆಶಾ ಶ್ರೀನಿವಾಸ್, ಉಪ ಪ್ರಾಂಶುಪಾಲರು, ಆಂಗ್ಲ ಮಾಧ್ಯಮ ಶಾಲೆ ಎನ್.ಐ.ಟಿ.ಕೆ, ಸುರತ್ಕಲ್ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮಹಮದ್ ಹುಸೇನ್, ತೋಕೂರು. ನಿವೃತ್ತ ಮುಖ್ಯೋಪಾಧ್ಯಾಯರು, ಸರಕಾರಿ ಪ್ರೌಢ ಶಾಲೆ ಬೆಂಗ್ರೆ, ಕಸಬ ಮಂಗಳೂರು ಮತ್ತು ಪಾರ್ವತಿ ನಿವೃತ್ತ ಶಿಕ್ಷಕಿ, ಅಂಗನವಾಡಿ ಕೇಂದ್ರ, ಕೆರೆಕಾಡು ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಸ್ಪೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್, ಅಧ್ಯಕ್ಷ ದೀಪಕ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಸುನಿಲ್ ಜಿ ದೇವಾಡಿಗ, ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಾಧ್ಯಕ್ಷೆ ಯಶೋಧ ದೇವಾಡಿಗ ಹಾಗೂ ಗೌರವ ಮಾರ್ಗದರ್ಶಕರು ಪದಾಧಿಕಾರಿಗಳು ಸರ್ವ ಸದಸ್ಯರು ಮತ್ತು ಸರ್ವ ಸದಸ್ಯೆಯರ ಪ್ರಕಟಣೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.