Saturday, June 14, 2025
Homeರಾಜ್ಯಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದ ಟೆಕ್ಕಿ ಆತ್ಮಹತ್ಯೆ

ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಎರಡು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ಈ ಘಟನೆ ನಡೆದಿದೆ. ಟೆಕ್ಕಿ ಪೂಜಾ (22) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಎರಡು ವರ್ಷಗಳ ಹಿಂದೆ ಸುನಿಲ್‌ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ಪತಿ ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೂಜಾ ಹೆತ್ತವರು ಆರೋಪಿಸಿದ್ದಾರೆ. ಗಂಗಮ್ಮನಗುಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular