Sunday, July 21, 2024
Homeರಾಷ್ಟ್ರೀಯಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

ಚೆನ್ನೈ: ಬೆಂಗಳೂರಿಗೆ ಹೊರಟಿದ್ದ ವಿಮಾನವೊಂದು ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ತಿರುಚಿರಾಪಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ತಿರುವನಂತಪುರಂನಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿ 137 ಪ್ರಯಾಣಿಕರಿದ್ದರು.

ಶುಕ್ರವಾರ ಸಂಜೆ ಬೆಂಗಳೂರಿನತ್ತ ಹೊರಟಿದ್ದ ಏರ್ ಇಂಡಿಯಾ ವಿಮಾನದ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿ ತುರ್ತು ಭೂಸ್ಪರ್ಶ ಮಾಡಿತ್ತು. ಈ ವಿಮಾನದಲ್ಲಿ 175 ಮಂದಿ ಪ್ರಯಾಣಿಕರಿದ್ದರು. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular