ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಲವ್, ಸೆಕ್ಸ್, ದೋಖಾಗೆ 17 ವರ್ಷದ ಅಪ್ರಾಪ್ತ ಯುವತಿ ಮನನೊಂದು ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸದ್ಯ ಆರೋಪಿ ಯುವಕ ಪರಾರಿಯಾಗಿದ್ದಾನೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಯುವತಿಗೆ ತನ್ನ ಸಂಬಂಧಿ ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬಾತನ ಜೊತೆಗೆ ಲವ್ ಆಗಿದೆ. ಪ್ರವೀಣನೂ ಬೆಂಗಳೂರಿನಲ್ಲಿ ಮೆಕ್ಯಾನಿಕ್ ಆಗಿದ್ದು, ಊರಿಗೆ ಬಂದಾಗ ಮೀಟ್ ಮಾಡುತ್ತಿದ್ದ. ಕೆಲವೇ ತಿಂಗಳ ಲವ್ನಲ್ಲಿ ಇವರಿಬ್ಬರ ಬಾಂಧವ್ಯ ಕೂಡ ಗಟ್ಟಿಯಾಗಿತ್ತು. ಕೇವಲ ಎಂಟು ತಿಂಗಳ ಪ್ರೇಮದಲ್ಲಿ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದರು.
ಈ ಸಂದರ್ಭದಲ್ಲಿ ಯುವತಿಗೆ ಪ್ರವೀಣ ಗರ್ಭ ನಿರೋಧಕ ಮಾತ್ರೆಯನ್ನು ನೀಡಿದ್ದಾನೆ. ಯುವತಿ ಮನೆಯವರು ವಯಸ್ಸು ಪೂರ್ತಿಯಾದಾಗ ಮದುವೆ ಮಾಡಿ ಕೊಡೋದಾಗಿ ಹೇಳಿದ್ದಾರೆ. ಪ್ರೀತಿ ಸಾಗುತ್ತಿದ್ದಾಗ ಪ್ರವೀಣ್ಗೆ ಯಾಕೋ ಈಕೆಗೆ ಜೊತೆಗಿನ ಸಾಂಗತ್ಯ ಬೋರ್ ಎನಿಸಿದೆ. ದೂರ ಆಗೋಣ ಬ್ರೇಕಪ್ ಅಂತಾ ಹೇಳಿದ್ದಾನೆ. ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಪ್ರವೀಣ ಕೈ ಕೊಡುತ್ತಿರೋದನ್ನು ಸಹಿಸಲಾಗದೆ ಯುವತಿ ಇಲಿ ಪಾಶಣ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಇತ್ತ ಯುವತಿ ಸಾವನ್ನಪ್ಪುತ್ತಲೇ ಆರೋಪಿ ಪ್ರವೀಣ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ.