ವಿಜಯಪುರ: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಇನ್ನೂ ಮಳೆಯ ಮುನ್ಸೂಚನೆ ಇಲ್ಲವಾದ ಕಾರಣ ಬಿಸಿಲ ಝಳದಿಂದ ಜನ ತತ್ತರಿಸಿದ್ದಾರೆ. ಇದೀಗ ರಾಜ್ಯದ ಐದು ಜಿಲ್ಲೆಗಳಲ್ಲಿ ಅತೀ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಈ ಐದು ಜಿಲ್ಲೆಗಳಲ್ಲಿ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ಗಿಂತಲೂ ಹೆಚ್ಚಾಗಿದೆ.
ಬಾಗಲಕೋಟೆ ಜಿಲ್ಲೆಯ ಕರಡಿಯಲ್ಲಿ 45.3 ಡಿಗ್ರಿ ಸೆಲ್ಸಿಯಸ್, ರಾಯಚೂರು ಜಿಲ್ಲೆಯ ಗಿಲ್ಲೆಸೂಗೂರಿನಲ್ಲಿ 45.2, ಯಾದಗಿರಿ ಜಿಲ್ಲೆಯ ಗೋಗಿಯಲ್ಲಿ 45.1 ಮತ್ತು ವಿಜಯಪುರ ಜಿಲ್ಲೆಯ ನಾಲತವಾಡದಲ್ಲಿ 45 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.