ಟೆಂಪೋ ಡಿಕ್ಕಿ ಹೊಡೆದು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ರಾಧಾಕೃಷ್ಣ ರಾವ್‌ ನಿಧನ

0
246

ಮಂಗಳೂರು: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಟೆಂಪೊ ಡಿಕ್ಕಿ ಹೊಡೆದು ರಾಮಕ್ಷತ್ರಿಯ ಸಂಘದ ಅಧ್ಯಕ್ಷ ರಾಧಾಕೃಷ್ಣ ರಾವ್‌ ನಿಧನರಾಗಿದ್ದಾರೆ. ನಗರದ ಕುಚಿಕಾಡು ಎಂಬಲ್ಲಿ ಈ ಅವಘಡ ಸಂಭವಿಸಿದೆ.
ಬಿಕರ್ನಕಟ್ಟೆ ನಿವಾಸಿ ರಾಧಾಕೃಷ್ಣ ರಾವ್‌ ಅವರು ಕಲ್ಪನೆ ಕಡೆಯಿಂದ ಬಿಕರ್ನಕಟ್ಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಚಿಕಾಡು ಎಂಬಲ್ಲಿ ಟೆಂಪೋ ಡಿಕ್ಕಿ ಹೊಡೆದಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
ಮೆಸ್ಕಾಂ ಜೆಪ್ಪು ಶಾಖೆಯ ಕಿರಿಯ ಅಭಿಯಂತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು ಬಿಕರ್ನಕಟ್ಟೆಯ ಶ್ರೀ ಹರಿಹರ ಪಾಂಡುರಂಗ ವಿಠಲ ಭಜನಾ ಮಂದಿರದ ಅಧ್ಯಕ್ಷರಾಗಿದ್ದರು. ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಚಿರಪರಿಚಿತರಾಗಿದ್ದರು. ಪತ್ನಿ ನಿವೃತ್ತ ಶಿಕ್ಷಕಿ ಗೌರಿ ರಾಧಾಕೃಷ್ನ, ಪುತ್ರ ಹಾಗೂ ಪುತ್ರಿಯನ್ನು ಅವರು ಅಗಲಿದ್ದಾರೆ.

LEAVE A REPLY

Please enter your comment!
Please enter your name here