ಟೆಂಪೊ ಡಿಕ್ಕಿ : ಗಂಭೀರ ಗಾಯಗೊಂಡಿದ್ದ 25 ವರ್ಷದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

0
25

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ಆ.20ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಕುಕ್ಕಳ ನಿವಾಸಿ 25 ವರ್ಷದ ಸುನಿಲ್ ಎಂದು ಗುರುತಿಸಲಾಗಿದೆ. ಆ.20ರಂದು ರಾತ್ರಿ ಸುನಿಲ್ ಅವರು ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಟೆಂಪೊವೊಂದು ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.

ಅಪಘಾತದಲ್ಲಿ ಸುನಿಲ್ ಅವರ ತಲೆ ಹಾಗೂ ಎದೆ ಭಾಗಕ್ಕೆ ತೀವ್ರವಾಗಿ ಗಾಯವಾಗಿತ್ತು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಕಳೆದ ಎಂಟು ದಿನಗಳಿಂದ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದರು.

ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ನಡೆದ ಈ ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಹಾಗೂ ಪೊಲೀಸ್ ತನಿಖೆಯ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.