Friday, March 21, 2025
Homeಮುಲ್ಕಿಮೂಲ್ಕಿ: ಟೆಂಪೋ-ಸ್ಕೂಟರ್ ಅಪಘಾತ, ಮಮತಾ ಬಂಗೇರ (42) ನಿಧನ

ಮೂಲ್ಕಿ: ಟೆಂಪೋ-ಸ್ಕೂಟರ್ ಅಪಘಾತ, ಮಮತಾ ಬಂಗೇರ (42) ನಿಧನ

ಮೂಲ್ಕಿ : ಟೆಂಪೋ ರಿಕ್ಷಾವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕಿನ್ನಿಗೋಳಿ ಸಮೀಪ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಕೆ.ಎಸ್. ರಾವ್ ನಗರ ತಿರುವಿನ ರಸ್ತೆಯಲ್ಲಿ ಗುರುವಾರ ಟೆಂಪೋ ರಿಕ್ಷಾವೊಂದು ಹಿಂಬದಿಯಿಂದ ಬಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಮತಾ ಬಂಗೇರ ಅವರನ್ನು ಆಸ್ಪತ್ರೆಗೆ ದಾಖಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

ಮುಂಬಯಿಯಲ್ಲಿ ವಾಸವಿದ್ದ ಅವರು ಕಳೆದ ಕೆಲವು ಸಮಯಗಳಿಂದ ಶಿಮಂತೂರು ಬಳಿ ನೂತನವಾಗಿ ಮನೆ ನಿರ್ಮಿಸಿಕೊಂಡು ತಮ್ಮ ಪುತ್ರಿಯ ಜತೆ ವಾಸವಾಗಿದ್ದರು. ಮಹಿಳಾ ಸ್ವಸಹಾಯ ತಂಡ ಹಾಗೂ ಇತರ ಸಾಮಾಜಿಕ ಸಂಘಟನೆಯಲ್ಲಿ ಅವರು ಸಕ್ರಿಯರಾಗಿದ್ದರು. ಅವರ ಪತಿ ಮೈಸೂರಿನಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಗಳು ನಾಲ್ಕನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ. ಮಂಗಳೂರು ಉತ್ತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular