Saturday, June 14, 2025
Homeಉಡುಪಿತೆಂಕನಿಡಿಯೂರು ಕುಮೆಕೆರೆ ಕಾಮಗಾರಿ ಶಾಸಕ ಯಶ್ ಪಾಲ್ ಸುವರ್ಣ ಪರಿಶೀಲನೆ

ತೆಂಕನಿಡಿಯೂರು ಕುಮೆಕೆರೆ ಕಾಮಗಾರಿ ಶಾಸಕ ಯಶ್ ಪಾಲ್ ಸುವರ್ಣ ಪರಿಶೀಲನೆ

ತೆಂಕನಿಡಿಯೂರು ಗ್ರಾಮದಲ್ಲಿ ಸುಮಾರು 4 ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಕುಮೆಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತೆಂಕನಿಡಿಯೂರು ಗ್ರಾಮದ ಅತೀ ದೊಡ್ಡ ಕೆರೆಯಾಗಿರುವ ಕುಮೆಕೆರೆ ಅಭಿವೃದ್ಧಿ ಕಾಮಗಾರಿ ಅಂತಿಮ ಹಂತದಲ್ಲಿದ್ದು ಕೆರೆಯ ಸುತ್ತ ವಾಕಿಂಗ್ ಟ್ರ್ಯಾಕ್ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ. ಕೆರೆಯಲ್ಲಿ ಹಲವು ವರ್ಷಗಳಿಂದ ಹೂಳು ತೆರವು ಮಾಡದ ಕಾರಣ ಹೂಳು ತುಂಬಿದ್ದು ಮಳೆಗಾಲದ ಬಳಿಕ ಹೂಳು ತೆರವಿಗೆ ಕ್ರಮ ವಹಿಸುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಭಾಗದ ಜನರ ಬಹು ವರ್ಷದ ಬೇಡಿಕೆಯಾಗಿದ್ದ ಕುಮೆ ಕೆರೆ ಅಭಿವೃದ್ಧಿಯಿಂದ ಈ ಭಾಗದ ಅಂತರ್ಜಲ ಮಟ್ಟ ವೃದ್ಧಿಸಲಿದ್ದು, ಕೃಷಿ ಚಟುವಟಿಕೆಗಳಿಗೂ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರ ಶ್ರೀ ಸುಧಾಕರ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಅರುಣ್ ಜತ್ತನ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ವಿನೋದ್ ಸುವರ್ಣ, ಸತೀಶ್ ಪೂಜಾರಿ ತೊಟ್ಟಂ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಸಾಲ್ಯಾನ್, ಗೌರವಾಧ್ಯಕ್ಷರಾದ ಶ್ರೀ ಪ್ರಭಾಕರ್ ಪೂಜಾರಿ, ಪ್ರಮುಖರಾದ ರಮೇಶ್ ತೊಟ್ಟo ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular