ಇದರ ಮೂರನೇ ವರುಷದ ಸಮಾಲೋಚನ ಸಭೆಯು ಬಿ. ಸಿ ರೋಡಿನಲ್ಲಿ ನಡೆಯಿತು. ಮಳೆಗಾಲದಲ್ಲಿ ವೃತ್ತಿಪರ ಯಕ್ಷಗಾನ ಕಲಾವಿದರು ಜೀವನೋಪಾಯಕ್ಕಾಗಿ ಪರಂಪರೆಯಿಂದ ನಡೆದು ಬಂದ ಮಾರ್ಗವೇ ಮನೆಮನೆ ಯಕ್ಷಗಾನ ಇದು ವ್ಯಾಪಾರಿಕರಣವಾಗದೆ ದೇವರ ಸೇವೆ ಎಂಬ ಮನೋಭಾವನೆ ಯೊಂದಿಗೆ ಕಲಾಭಿಮಾನಿಗಳ ಮನಸಿಗೆ ಹಿತವಾಗುವ ಸಭ್ಯತೆಯ ಪ್ರದರ್ಶನವನ್ನು ನೀಡುವುದರೊಂದಿಗೆ ಶಿಸ್ತನ್ನು ಕಾಪಾಡಿಕೊಳ್ಳಬೇಕು ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಸಲಹೆ ನೀಡಿದರು.. ಚಿಕ್ಕ ಮೇಳದಲ್ಲಿ ದುಡಿಯುತ್ತಿದ್ದ ಕಲಾಮಾತೆಯ ಮಡಿಲು ಸೇರಿದ ಪ್ರವೀತ್ ಆಚಾರ್ಯ ಗುರುವಾಯನಕೆರೆ ಮತ್ತು ಸತೀಶ್ ಆಚಾರ್ಯ ವೇಣೂರು, ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮುಂದಿನ ಮಳೆಗಾಲದ ತಿರುಗಾಟವನ್ನು ತಳಕಲ ಕಾಶಿ ಶ್ರೀವಿಶ್ವನಾಥೇಶ್ವರ ದೇವಸ್ಥಾನದಲ್ಲಿ ಜೂನ್ 5ನೇ ತಾರೀಕಿನಂದು ಗಣ್ಯರ ಉಪಸ್ಥಿತಿಯಲ್ಲಿ ಆರಂಭಿಸುವುದೆಂದು ತೀರ್ಮಾನಿಸಲಾಯಿತು. ಉಪಾಧ್ಯಕ್ಷರುಗಳಾದ ಭಾಗವತರಾದ ಮೋಹನ್ ಕಲಂಬಾಡಿ, ರಮೇಶ್ ಕುಲಶೇಖರ, ಕೋಶಾಧಿಕಾರಿ ದಿವಾಕರದಾಸ್ ಕಾವಲ್ ಕಟ್ಟೆ, ಪ್ರಧಾನ ಕಾರ್ಯದರ್ಶಿ ಕುಮಾರ್ ಮಾಲೇಮಾರ್ , ಪದಾಧಿಕಾರಿಗಳು ಮತ್ತು ತೆಂಕುತಿಟ್ಟು ಚಿಕ್ಕ ಮೇಳಗಳ ಸಂಚಾಲಕರು, ಮತ್ತು ಕಲಾವಿದರು ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಯಕ್ಷಬೊಳ್ಳಿ ಕಡಬ ದಿನೇಶ್ ರೈ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.