ಭೀಕರ ಅಪಘಾತ : ಮೂವರು ವಿದ್ಯಾರ್ಥಿಗಳು ಮೃತ್ಯು

0
113

ದೇವನಹಳ್ಳಿ : ಭೀಕರ ಅಪಘಾತ : ಮೂವರು ವಿದ್ಯಾರ್ಥಿಗಳು ಮೃತ್ಯು ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯ ಬೈಚಾಪುರ- ಬೆಟ್ಟ ಕೋಟೆ ಮಾರ್ಗದಲ್ಲಿ ಸಂಭವಿಸಿದೆ.

ಮೃತರು ಹುಣಸಮಾರೇನಹಳ್ಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ದೇವನಹಳ್ಳಿಯಿಂದ ಬೂದಿಗೆರೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದದೆ .ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ , ಬಳಿಕ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಗೆ ಡಿಕ್ಕಿಯಾಗಿದೆ. ಪರಿಣಾಮ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು , ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here