ಕಾಪು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಮೇಲೆರಿದ ಘಟನೆ ಜೂ.6ರ ಶುಕ್ರವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯ ಉದ್ಯಾವರದ ಕಿಯಾ ಶೋರೂಮ್ ಬಳಿ ನಡೆದಿದೆ.
ಎಕ್ಸ್ ಯು ವಿ ಕಾರು ಮಂಗಳೂರಿನಿಂದ ಉಡುಪಿಯತ್ತ ತೆರಳುವಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಡಿವೈಡರ್ ಮೇಲಿನ ಕ್ರಾಶ್ ಗಾರ್ಡ್ ಸಹಿತ ಕಾರು ನಜ್ಜು ಗುಜ್ಜಾಗಿದ್ದು ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.