ಬನ್ನಡ್ಕದಲ್ಲಿ ಭೀಕರ ರಸ್ತೆ ಅಪಘಾತ : ಓರ್ವ ಮೃತ್ಯು

0
103

ಬನ್ನಡ್ಕ : ಕಾಮಗಾರಿ ಹಂತದಲ್ಲಿರುವ ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪಿಯುಸಿ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಖ್ಯಾತ ಕಂಟೆಂಟ್ ಕ್ರಿಯೇಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೂಡುಬಿದಿರೆಯ ರೋಟರಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿವಿದ್ಯಾರ್ಥಿ, ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ- ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತ ದುರ್ದೈವಿ. ಅಪಘಾತದ ವೇಳೆ ಮೂಡುಬಿದಿರೆಯ ಖ್ಯಾತ ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಬೈಕ್ ಚಲಾಯಿಸುತ್ತಿದ್ದು, ಶ್ರವಣ್ ಸಹಸವಾರರಾಗಿದ್ದರು.

ಬನ್ನಡ್ಕ ದೇವಸ್ಥಾನದ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಮೂಡುಬಿದಿರೆ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡ್ಡಿದ್ದು, ಮೊದಲು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸ್ಥಿತಿ ಗಂಭೀರವಾಗಿದ್ದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆದರೆ ಶ್ರವಣ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here