ಮೂಡುಬಿದಿರೆ: ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿ ೭೦ರ ವಿಶಾಲ ನಗರ ಎಂಬಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಿಶಾಲ್ ನಗರದ ಪೆಟ್ರೋಲ್ ಪಂಪ್ ಬಳಿ ರಿಕ್ಷಾ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಮೂಡುಬಿದಿರೆಯ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ರಿಕ್ಷಾ ಮತ್ತು ಬೈಕ್ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಮೂಡುಬಿದಿರೆ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.