ಭೀಕರ ರಸ್ತೆ ಅಪಘಾತ : ನವದಂಪತಿ ಸ್ಥಳದಲ್ಲೇ ಮೃತ್ಯು

0
75

ಶಿವಮೊಗ್ಗ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಬಳಿ ಈ ದುರಂತ ನಡೆದಿದೆ. ಬಾಬು (30) ಹಾಗೂ ಸಾವಿತ್ರಿ (26) ಮೃತ ದಂಪತಿ. ಮೃತರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಮೂಲದವರು ಎಂದು ತಿಳಿದುಬಂದಿದೆ.

ಹೋಟೆಲ್ ಕೆಲಸ ಮುಗಿಸಿ ಊರಿಗೆ ತೆರಳುತ್ತಿದ್ದ ವೇಳೆ ಬೈಕ್ ಗೆ ವೇಗವಾಗಿ ಬಂದ ಲಾರಿ ಡಿಕ್ಕಿಯಾಗಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here