ಬಂಟ್ವಾಳ: ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾ ಪೂಜೆಯು ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಆ. 8ರಂದು ಜರಗಲಿದೆ.
ಅಂದು ಬೆಳಿಗ್ಗೆ 5-30ರಿಂದ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ಕಲ್ಪೋಕ್ಷ ಲಕ್ಷ್ಮೀಪೂಜೆ, ಶ್ರೀ ನಾಗದೇವರಿಗೆ ಶೀರಾಭಿಷೇಕ, ಗೋಮಾತೆ ಪೂಜೆ ನಡೆಯಲಿದೆ. ಬೆಳಿಗ್ಗೆ 9-30ರಿಂದ ಚಂಡಿಕಾಹೋಮ, ಕನಕಧಾರಾ ಯಾಗ, ಲಕ್ಷ್ಮೀನಾರಾಯಣ ಹೃದಯಹೋಮ, ಬೆಳಿಗ್ಗೆ 11 ಗಂಟೆಯಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಮಧ್ಯಾಹ್ನ ಮಹಾಮಂಗಳಾರತಿ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ದುರ್ಗಾಪೂಜೆ, ಸಪ್ರಶತೀ ಪಾರಾಯಣ, ಅಷ್ಠಾವಧಾನ ಸೇವೆ ನಡೆಯಲಿದೆ. ರಾತ್ರಿ ಅನ್ನಪ್ರಸಾದ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಂದು ಮಧ್ಯಾಹ್ನ 2-00 ಗಂಟೆಯಿಂದ ಸ್ವರ ಸಮರ್ಪಣೆ ಸಂಗೀತ ಕಾರ್ಯಕ್ರಮ, ಸಂಜೆ 5-00 ರಿಂದ ನಾಟ್ಯ ವೈಭವಂ ಶಾಸ್ತ್ರೀಯ ಮತ್ತು ಜಾನಪದ ನೃತ್ಯ ಸಂಗಮ ಹಾಗೂ ರಾತ್ರಿ 9-30ರಿಂದ ಯಕ್ಷಗಾನ ಬಯಲಾಟ ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ ನಡೆಯಲಿದೆ.