ಸಿಎಂ ಸಿದ್ದರಾಮಯ್ಯ ಮಂಡಿಸಿದ 17ನೇ ಬಜೆಟ್ ಜನಪರ ಹಾಗೂ ಸಮಗ್ರ ಅಭಿವೃದ್ಧಿಗೆ ಪೂರಕ : ಐವನ್ ಡಿಸೋಜಾ

0
6

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಮ್ಮಯ್ಯ ಅವರು ಮಂಡಿಸಿದ 17ನೇ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದ್ದು, ಸಮಾಜದ ಎಲ್ಲಾ ರ‍್ಗಗಳ ಜನರನ್ನು ಒಳಗೊಂಡ ಜನಪರ ಬಜೆಟ್ ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ತಿಳಿಸಿದ್ದಾರೆ.

ಸುಮಾರು ₹4.48ಲಕ್ಷ ಕೋಟಿಗಿಂತಲೂ ಹೆಚ್ಚಿನ ಮೊತ್ತದ ಈ ಬಜೆಟ್ ರಾಜ್ಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವಂತಾಗಿದೆ. ರಾಜ್ಯದ ಅನೇಕ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ನೀಡುವ ಜೊತೆಗೆ ಗ್ಯಾರೆಂಟಿ ಯೋಜನೆಗಳನ್ನು ಮುಂದುವರಿಸುವ ಮೂಲಕ ಜನಸಾಮಾನ್ಯರಿಗೆ ನ್ಯಾಯ ಒದಗಿಸುವ ಕೆಲಸವನ್ನು ರ‍್ಕಾರ ಮಾಡಿದೆ ಎಂದು ಅವರು ಹೇಳಿದ್ದಾರೆ.

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಅನೇಕ ಭರವಸೆಗಳನ್ನು ಈ ಬಜೆಟ್‌ನಲ್ಲಿ ಜಾರಿಗೆ ತರುವ ಮೂಲಕ ರ‍್ಕಾರ ತನ್ನ ಬದ್ಧತೆಯನ್ನು ತೋರಿಸಿದೆ. ರ‍್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಬಜೆಟ್‌ನಲ್ಲಿ ಜಾರಿಗೆ ತರುವುದಕ್ಕೆ ಈ ಬಜೆಟ್ ಉತ್ತಮ ಉದಾಹರಣೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಅಭಿವೃದ್ಧಿಗೆ ಅನೇಕ ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕೊಲ್ಲೂರು ಮೂಕಾಂಬಿಕ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸುವ ನರ‍್ಧಾರ ಕೈಗೊಂಡಿರುವುದು ಸ್ವಾಗತರ‍್ಹವಾಗಿದೆ. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಅಭಿವೃದ್ಧಿಗೆ ಅನುದಾನ ನೀಡಲಾಗಿದ್ದು, ಮೆಡಿಕಲ್ ಕಾಲೇಜಿನ ಕಾಮಗಾರಿಯನ್ನು ಪ್ರಾರಂಭಿಸಲು ಬಜೆಟ್‌ನಲ್ಲಿ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಮಂಗಳೂರಿನ ಜೈಲು ವಿಸ್ತರಣೆಗೆ ಸಂಬಂಧಿಸಿದಂತೆ ಎರಡನೇ ಹಂತದ ಕಾಮಗಾರಿಯನ್ನು ಕೈಗೊಳ್ಳಲು ಬಜೆಟ್‌ನಲ್ಲಿ ಪ್ರಸ್ತಾವಿಸಿರುವುದು ಮಹತ್ವದ ನರ‍್ಧಾರವಾಗಿದೆ. ಪರಿಷಿಷ್ಟ ಜಾತಿ ಹಾಗೂ ಪರಿಷಿಷ್ಟ ಪಂಗಡದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತೇಜಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ರ‍್ಕಿಂಗ್ ಹಾಸ್ಟೆಲ್ ಸ್ಥಾಪನೆಗೂ ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಂಗಳೂರು ಭಾಗದಲ್ಲಿ ಫಿಶರೀಸ್ ರಸ್ತೆಗಳ ಅಭಿವೃದ್ಧಿಗೆ ಸುಮಾರು ₹20 ಕೋಟಿ ಅನುದಾನ ಮೀಸಲಿಡಲಾಗಿದೆ. ಜೊತೆಗೆ ಮೀನು ಮಾರುಕಟ್ಟೆಗಳ ನರ‍್ಮಾಣ ಹಾಗೂ ಮೀನು ಮಾರಾಟ ಮಾಡುವ ಮಹಿಳೆಯರಿಗೆ ₹10,000 ರಿಂದ ₹20,000 ವರೆಗೆ ಸಹಾಯಧನ ನೀಡುವ ಯೋಜನೆಯೂ ಪ್ರಸ್ತಾವಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗಾಗಿ ಐಟಿ ಪರ‍್ಕ್ ಅಭಿವೃದ್ಧಿ ಮಾಡುವ ಪ್ರಸ್ತಾವನೆ ಮಾಡಲಾಗಿದ್ದು, ಇದರಿಂದ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ. ಜೊತೆಗೆ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಲಾಗಿದೆ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ವೇಗ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಹೊಸ ಪೊಲೀಸ್ ಠಾಣೆಗಳನ್ನು ಆರಂಭಿಸುವುದಕ್ಕೂ ಬಜೆಟ್‌ನಲ್ಲಿ ಪ್ರಸ್ತಾವಿಸಲಾಗಿದೆ. ಕುಡಿಯುವ ನೀರು ಸೇರಿದಂತೆ ಅನೇಕ ಮೂಲಭೂತ ಸೌರ‍್ಯಗಳನ್ನು ಸುಧಾರಿಸಲು ರ‍್ಕಾರ ಕ್ರಮ ಕೈಗೊಂಡಿರುವುದು ಶ್ಲಾಘನೀಯವಾಗಿದೆ ಎಂದು ಅವರು ಹೇಳಿದ್ದಾರೆ.

ಒಟ್ಟಾರೆ ಈ ಬಜೆಟ್ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದ್ದು, ಜನಪರ ಆಡಳಿತದ ದಿಟ್ಟ ಸಂಕಲ್ಪವನ್ನು ತೋರಿಸುತ್ತದೆ ಎಂದು ಶಾಸಕ ಐವನ್ ಡಿಸೋಜಾ ರವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here