ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಅಂಗಾಂಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ವ್ಯಕ್ತಿಯೊಬ್ಬನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್ ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಜಯನಗರದಲ್ಲಿ ನಡೆದಿದೆ.
ವಶಕ್ಕೆ ಪಡೆಯಲಾದ ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದ್ದು, ಅವನಿಗೆ ಬಿಎಂಆರ್‌ಸಿಎಲ್ 5,000 ರೂ. ದಂಡ ವಿಧಿಸಿದೆ. ಆರೋಪಿಯು ಮೆಟ್ರೋದಲ್ಲಿ ಪ್ರಯಾಣ ಮಾಡುವ ಮಹಿಳೆಯರ ಖಾಸಗಿ ಅಂಗಾಂಗಗಳ ಫೋಟೋ ಹಾಗೂ ವಿಡಿಯೋ ತೆಗೆಯುತ್ತಿದ್ದ. ಆರೋಪಿಯ ಮೊಬೈಲ್‍ನಲ್ಲಿ ಸುಮಾರು 50 ಯುವತಿಯರ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿವೆ.