ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ

0
733

ನವದೆಹಲಿ: ಭಾತದ ಸಿಂದೂರ್ ಕಾರ್ಯಾಚರಣೆ ಬೆನ್ನಲ್ಲೇ ಈಗ ಬಲೂಚಿಸ್ತಾನ ಸೇನೆ ಕೂಡ ಪಾಕಿಸ್ತಾನಕ್ಕೆ ಆಘಾತ ನೀಡಿದೆ. ಪಾಕಿಸ್ತಾನಿ ಸೇನಾ ವಾಹನದ ಮೇಲೆ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ (BLA) ನಡೆಸಿದ ದಾಳಿಯಲ್ಲಿ 12 ಮಂದಿ ಪಾಕಿಸ್ತಾನಿ ಯೋಧರು ಮೃತಪಟ್ಟಿದ್ದಾರೆ. ಐಇಡಿ ಮೂಲಕ ಪಾಕ್ ಸೇನಾ ವಾಹನವನ್ನು ಸ್ಫೋಟಿಸಿರುವುದಾಗಿ ಬಲೂಚಿಸ್ತಾನ ಸೇನೆ ಹೇಳಿಕೊಂಡಿದೆ. ಈ ಘಟನೆ ಬಲೂಚಿಸ್ತಾನದ ಬೋಲಾನ್‌ನಲ್ಲಿ ನಡೆದಿದೆ. ಬಲೂಚ್ ಲಿಬರೇಶನ್ ಆರ್ಮಿಯ ವಿಶೇಷ ಯುದ್ಧತಂತ್ರದ ಕಾರ್ಯಾಚರಣೆ ಸ್ಕ್ವಾಡ್ಬೋಲನ್‌ನ ಮಾಚ್ ಕುಂಡ್ ಪ್ರದೇಶದಲ್ಲಿ ರಿಮೋಟ್ ಕಂಟ್ರೋಲ್ಡ್ ಐಇಡಿಯೊಂದಿಗೆ ಬೃಹತ್ ಸ್ಫೋಟ ಮಾಡಿಸಿದೆ. ಪಾಕ್ ಸೈನಿಕರು ಮಿಲಿಟರಿ ಕಾರ್ಯಾಚರಣೆಗೆ ಹೋಗುತ್ತಿದ್ದಾಗ ಈ ದಾಳಿ ನಡೆಸಲಾಗಿದೆ.

ಪಾಕಿಸ್ತಾನದ ನೈಋತ್ಯ ಪ್ರಾಂತ್ಯದ ಬಲೂಚಿಸ್ತಾನದ ಕಚ್ಚಿ ಜಿಲ್ಲೆಯ ಮಾಚ್ ಪ್ರದೇಶದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಲಾಗಿದೆ. ಈ ದಾಳಿ ಮಂಗಳವಾರ ನಡೆದಿತ್ತು. ಆದರೆ ದಾಳಿಯ ದೃಶ್ಯಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿವೆ. ವಾಹನದಲ್ಲಿ ತೆರಳುತ್ತಿದ್ದ ಪಾಕಿಸ್ತಾನಿ ಸೈನಿಕರ ದೇಹಗಳು ಸ್ಫೋಟದ ನಂತರ ಗಾಳಿಯಲ್ಲಿ ಹಲವಾರು ಮೀಟರ್‌ಗಳಷ್ಟು ಹಾರಿರುವುದು ವಿಡಿಯೋದಲ್ಲಿ ಕಾಣಿಸಿದೆ.

ಬಲೂಚ್ ಲಿಬರೇಶನ್ ಆರ್ಮಿಯ ಸೈನಿಕರು ಮಾಚ್ ಪ್ರದೇಶದಲ್ಲಿ ಸ್ಫೋಟಕಗಳೊಂದಿಗೆ ಭದ್ರತಾ ಪಡೆ ವಾಹನವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆ ದಾಳಿಯ ನಂತರ ತಿಳಿಸಿದೆ. ಈ ದಾಳಿಯಲ್ಲಿ ತನ್ನ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಸೇನೆ ಮೊದಲಿಗೆ ಹೇಳಿತ್ತು. ಆದರೆ, ನಂತರದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿರುವುದು ತಿಳಿದುಬಂದಿದೆ. ಭಯೋತ್ಪಾದಕರ ನಿರ್ಮೂಲನೆಗಾಗಿ ಆ ಪ್ರದೇಶದಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಪಾಕಿಸ್ತಾನ ಸೇನೆ ಹೇಳಿಕೊಂಡಿದೆ.

ಬಲೂಚ್ ಆರ್ಮಿ ದಾಳಿಯಲ್ಲಿ ಮೃತಪಟ್ಟವರಲ್ಲಿ ಪಾಕಿಸ್ತಾನ ಸೇನೆಯ ವಿಶೇಷ ಕಾರ್ಯಾಚರಣೆ ಕಮಾಂಡರ್ ತಾರಿಕ್ ಇಮ್ರಾನ್ ಮತ್ತು ಸುಬೇದಾರ್ ಉಮರ್ ಫಾರೂಕ್ ಸೇರಿದ್ದಾರೆ ಎಂದು ಸೇನೆ ತಿಳಿಸಿದೆ.

ಕಳೆದ ಕೆಲವು ಸಮಯಗಳಿಂದ ಬಲೂಚಿಸ್ತಾನದ ಬಲೂಚ್ ಲಿಬರೇಶನ್ ಆರ್ಮಿ ಪಾಕಿಸ್ತಾನಕ್ಕೆ ಕಠಿಣ ಸವಾಲು ಒಡ್ಡುತ್ತಿದೆ. ಇದೀಗ ಪಾಕಿಸ್ತಾನದ 12 ಮಂದಿ ಯೋಧರನ್ನು ಹತ್ಯೆ ಮಾಡಿದ ಬಳಿಕ, ನಿಖರ ಗುರಿಯೊಂದಿಗೆ ಇಂತಹ ಇನ್ನಷ್ಟು ದಾಳಿಗಳನ್ನು ನಡೆಸುತ್ತೇವೆ. ಹೆಚ್ಚಿನ ದಾಳಿಗಳನ್ನು ನಡೆಸಲಿದ್ದೇವೆ ಎಂದು ಬಲೂಚ್ ಲಿಬರೇಷನ್ ಆರ್ಮಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.

LEAVE A REPLY

Please enter your comment!
Please enter your name here