ಶಾಪಿಂಗ್ ಮಾಲ್‌ನ ಮೂರನೇ ಮಹಡಿಯಲ್ಲಿ ಲಿಫ್ಟ್ ಹತ್ತಲೆಂದು ಹೋದಾಗ ತಂದೆಯ ಕೈಯಲ್ಲಿದ್ದ ಒಂದು ವರ್ಷದ ಮಗುವೊಂದು ಆಯತಪ್ಪಿ ಜಾರಿ 40 ಅಡಿಗಳಷ್ಟು ಕೆಳಗೆ ಬಿದ್ದಿರುವ ದಾರುಣ ಘಟನೆಯೊಂದು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಮಾಲ್‌ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಮಗು ಸುಮಾರು 40 ಅಡಿ ಆಳಕ್ಕೆ ಬಿದ್ದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಂತವರ ಹೃದಯವನ್ನು ಕೂಡಾ ಒಮ್ಮೆ ಅಲ್ಲೋಲಕಲ್ಲೋಲ ಮಾಡಿಸುತ್ತೆ. ಮೂರನೇ ಮಹಡಿಯಿಂದ ಬಿದ್ದ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಗು ಸಾವಿಗೀಡಾಗಿದೆ ಎಂದು ವೈದ್ಯರು ಹೇಳಿದ್ದಾರೆ.