ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದು : ಎಸ್.ಆರ್. ಸತೀಶ್ ಚಂದ್ರ

0
9

ಶಿರ್ವ : ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷವಾಗಿ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖರಾದ ಎಸ್.ಆರ್. ಸತೀಶ್ ಚಂದ್ರ ಹೇಳಿದರು.

ಅವರು ಮಂಗಳವಾರ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಸಹಕಾರ ಭಾರತಿ ಮೈಸೂರು ವಿಭಾಗದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಸುಬ್ರಹ್ಮಣ್ಯ ಎಡಗೆರೆ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಮಹಿಳಾ ಪ್ರಮುಖ್ ವಿದ್ಯಾಪೈ, ರಾಷ್ಟ್ರೀಯ ಗ್ರಾಹಕ ಭಂಡಾರ ಪ್ರಮುಖ ಭಾರತಿ ಭಟ್, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಮಂಜುನಾಥ ಎಸ್ಕೆ , ರಾಜ್ಯ ಸಂಘಟನಾ ಕಾರ್ಯದರ್ಶಿ ಮಂಜುನಾಥ ಬಿ.ಆರ್, ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ರಾಜ್ಯ ಕಾರ್ಯದರ್ಶಿ ಮಾಧುಸ್ವಾಮಿ ಯವರು ಉಪಸ್ಥಿತರಿದ್ದರು.

.ಉಡುಪಿ ಜಿಲ್ಲಾಧ್ಯಕ್ಷ ದಿನೇಶ್ ಹೆಗಡೆ ಆತ್ರಾಡಿ ಸ್ವಾಗತಿಸಿದರು. ಮೈಸೂರು ವಿಭಾಗ ಪ್ರಮುಖ ಮೋಹನ್ ಕುಂಬಳೇಕರ್ ಕಾರ್ಯಕ್ರಮ ನಿರೂಪಿಸಿದರು. ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಸಹಕಾರ ಭಾರತಿ ಉಡುಪಿ ಜಿಲ್ಲಾ ಕೋಶಾಧ್ಯಕ್ಷ ಪ್ರಸಾದ್ ಶೆಟ್ಟಿ ವಂದಿಸಿದರು.

ಸಭೆಯಲ್ಲಿ ಮೈಸೂರು ನಗರ, ಮೈಸೂರು ಗ್ರಾಮಾಂತರ, ಹಾಸನ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮಂಗಳೂರು ಮಹಾನಗರ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 40 ಮಂದಿ ರಾಷ್ಟ್ರೀಯ, ರಾಜ್ಯಮಟ್ಟದ ಜವಾಬ್ದಾರಿಯುಳ್ಳ ಪ್ರಮುಖರು ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಭಾಗವಹಿಸಿ ಸಂಘಟನೆಯ ಮುಂದಿನ ಕಾರ್ಯಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.